John 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
Kannada BSI Bible 2016
ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರೋಗಿಯು - ಸ್ವಾಮೀ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವವರು ಒಬ್ಬರೂ ಇಲ್ಲ; ನಾನು ಬರುವದರೊಳಗೆ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
Kannada Bible (KNCL) BSI 2016
“ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.