John 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
Kannada BSI Bible 2016
ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂದು ಹೇಳಲಾಗಿ ಯೇಸು - ಆ ಜನರನ್ನು ಊಟಕ್ಕೆ ಕೂಡ್ರಿಸಿರಿ ಅಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು; ಜನರು ಕೂತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
Kannada Bible (KNCL) BSI 2016
ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.