John 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
Kannada BSI Bible 2016
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು.
Kannada Bible (KNCL) BSI 2016
ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.