John 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
Kannada BSI Bible 2016
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.
Kannada Bible (KNCL) BSI 2016
ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.