John 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
Kannada BSI Bible 2016
ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರಮಾರ್ಗವಾಗಿ ಕಪೆರ್ನೌವಿುನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಮತ್ತು ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
Kannada Bible (KNCL) BSI 2016
ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.