John 6:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
Kannada BSI Bible 2016
ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನನ್ನು ದೋಣಿಯೊಳಗೆ ಕರಕೊಳ್ಳುವದಕ್ಕೆ ಮನಸ್ಸಾಗಿದ್ದರು; ಮತ್ತು ಆ ಕ್ಷಣವೇ ಆ ದೋಣಿಯು ಅವರು ಹೋಗಬೇಕೆಂದಿದ್ದ ಭೂವಿುಗೆ ಮುಟ್ಟಿತು.
Kannada Bible (KNCL) BSI 2016
ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.