John 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
Kannada BSI Bible 2016
ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿವಸ ಸಮುದ್ರದ ಆಚೇಕಡೆಯಲ್ಲಿ ನಿಂತುಕೊಂಡಿದ್ದ ಜನರು ಯೇಸುವನ್ನು ಹುಡುಕುತ್ತಿದ್ದರು; ಇಲ್ಲಿ ಒಂದೇ ಹಡಗು ಇದ್ದ ಹೊರತು ಬೇರೆ ದೋಣಿಯು ಇರಲಿಲ್ಲವೆಂದೂ ಶಿಷ್ಯರು ಮಾತ್ರ ಹೊರಟು ಹೋದದ್ದಲ್ಲದೆ ಯೇಸು ತನ್ನ ಶಿಷ್ಯರ ಸಂಗಡ ಆ ಹಡಗನ್ನು ಹತ್ತಲಿಲ್ಲವೆಂದೂ ಅವರಿಗೆ ತಿಳಿದಿತ್ತು.
Kannada Bible (KNCL) BSI 2016
ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.