John 6:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
Kannada BSI Bible 2016
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.
Kannada Bible (KNCL) BSI 2016
ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.