John 6:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
Kannada BSI Bible 2016
ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೇಸು ಇಲ್ಲಿ ಇಲ್ಲ, ಆತನ ಶಿಷ್ಯರೂ ಇಲ್ಲ ಎಂದು ಆ ಜನರು ನೋಡಿ ತಾವೇ ಆ ಸಣ್ಣ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌವಿುಗೆ ಬಂದರು.
Kannada Bible (KNCL) BSI 2016
ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.