John 6:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
Kannada BSI Bible 2016
ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಸಮುದ್ರದ ಆಚೇಕಡೆಯಲ್ಲಿ ಆತನನ್ನು ಕಂಡುಕೊಂಡು - ಗುರುವೇ, ಯಾವಾಗ ಇಲ್ಲಿಗೆ ಬರೋಣವಾಯಿತು? ಎಂದು ಕೇಳಿದ್ದಕ್ಕೆ,
Kannada Bible (KNCL) BSI 2016
ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.