John 6:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
Kannada Bible (KNCL) BSI 2016
ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.