John 6:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
Kannada BSI Bible 2016
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರು; ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವದಕ್ಕೆ ಕೊಟ್ಟನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ, ನೀನು ಏನು ಕೆಲಸ ನಡಿಸುತ್ತೀ? ಎಂದು ಕೇಳಿದಾಗ
Kannada Bible (KNCL) BSI 2016
ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.