John 6:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
Kannada BSI Bible 2016
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ; ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
Kannada Bible (KNCL) BSI 2016
ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.