John 6:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
Kannada BSI Bible 2016
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ
Kannada Bible (KNCL) BSI 2016
ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.