John 6:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
Kannada BSI Bible 2016
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.
Kannada Bible (KNCL) BSI 2016
ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.