John 6:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
Kannada BSI Bible 2016
ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತಂದೆಯನ್ನು ನೋಡಿದ್ದಾನೆಂದು ತಿಳಿಯಬೇಡಿರಿ; ದೇವರ ಬಳಿಯಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆ.
Kannada Bible (KNCL) BSI 2016
ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.