John 6:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
Kannada BSI Bible 2016
ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು
Kannada Bible (KNCL) BSI 2016
ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.