John 6:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
Kannada BSI Bible 2016
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;
Kannada Bible (KNCL) BSI 2016
ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.