John 6:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.
Kannada BSI Bible 2016
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು.
Kannada Bible (KNCL) BSI 2016
ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.