John 6:64 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
Kannada BSI Bible 2016
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.
Kannada Bible (KNCL) BSI 2016
ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.