John 6:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
Kannada BSI Bible 2016
ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು - ತಂದೆಯ ಅನುಗ್ರಹವಿಲ್ಲದೆ ಯಾರೂ ನನ್ನ ಬಳಿಗೆ ಬರಲಾರರು ಎಂಬದನ್ನು ನಾನು ನಿಮಗೆ ಅದರ ದೆಸೆಯಿಂದಲೇ ಹೇಳಿದೆನು ಅಂದನು.
Kannada Bible (KNCL) BSI 2016
“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”