John 6:71 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.
Kannada BSI Bible 2016
ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು.
Kannada Bible (KNCL) BSI 2016
ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.