John 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
Kannada BSI Bible 2016
ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲಿರುವ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಮೀನುಗಳೂ ಅವೆ; ಆದರೆ ಇಷ್ಟು ಜನರಿಗೆ ಅವು ಯಾತಕ್ಕಾದಾವು?
Kannada Bible (KNCL) BSI 2016
“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.