John 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
Kannada BSI Bible 2016
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.
Kannada Bible (KNCL) BSI 2016
ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.