John 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
Kannada BSI Bible 2016
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.
Kannada Bible (KNCL) BSI 2016
‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.