John 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
Kannada BSI Bible 2016
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.
Kannada Bible (KNCL) BSI 2016
ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.