John 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
Kannada BSI Bible 2016
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.
Kannada Bible (KNCL) BSI 2016
ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.