John 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
Kannada BSI Bible 2016
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.
Kannada Bible (KNCL) BSI 2016
ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.