John 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
Kannada BSI Bible 2016
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.
Kannada Bible (KNCL) BSI 2016
ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.