John 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
Kannada BSI Bible 2016
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು.
Kannada Bible (KNCL) BSI 2016
ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.