John 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
Kannada BSI Bible 2016
ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ನಿಮಗೆ ಸುನ್ನತಿಯೆಂಬ ಸಂಸ್ಕಾರವನ್ನು ನೇವಿುಸಿದನು. ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು. ಮತ್ತು ಆ ಸುನ್ನತಿಯನ್ನು ಸಬ್ಬತ್‍ದಿನದಲ್ಲಿಯೂ ಮಾಡುತ್ತೀರಿ.
Kannada Bible (KNCL) BSI 2016
ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.