John 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
Kannada BSI Bible 2016
ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?
Kannada Bible (KNCL) BSI 2016
ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?