John 7:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
Kannada BSI Bible 2016
ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ಇವನು ಧಾರಾಳವಾಗಿ ಮಾತಾಡುತ್ತಾನೆ, ಅವರು ಅವನಿಗೆ ಏನೂ ಹೇಳುವದಿಲ್ಲ. ಹಿರೀಸಭೆಯವರು ಇವನೇ ಬರಬೇಕಾದ ಕ್ರಿಸ್ತನೆಂದು ನಿಶ್ಚಯಮಾಡಿಕೊಂಡಿದ್ದಾರೇನೋ?
Kannada Bible (KNCL) BSI 2016
ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?