John 7:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
Kannada BSI Bible 2016
ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.