John 7:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
Kannada BSI Bible 2016
ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.
Kannada Bible (KNCL) BSI 2016
ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.