John 7:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
Kannada BSI Bible 2016
ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.
Kannada Bible (KNCL) BSI 2016
ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.