John 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
Kannada BSI Bible 2016
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.
Kannada Bible (KNCL) BSI 2016
ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.