John 7:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
Kannada BSI Bible 2016
ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.
Kannada Bible (KNCL) BSI 2016
ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.