John 7:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
Kannada BSI Bible 2016
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?
Kannada Bible (KNCL) BSI 2016
ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?