John 7:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
Kannada BSI Bible 2016
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.