John 7:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
Kannada BSI Bible 2016
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.
Kannada Bible (KNCL) BSI 2016
ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.