John 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
Kannada BSI Bible 2016
ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ತಾನು ಮಾಡುವದನ್ನು ಮರೆಯಲ್ಲಿ ಮಾಡುವದಿಲ್ಲವಲ್ಲಾ; ನೀನು ಇಂಥ ಕಾರ್ಯಗಳನ್ನು ಮಾಡುವವನಾದ್ದರಿಂದ ಲೋಕಕ್ಕೆ ತಿಳಿಯಪಡಿಸಿಕೋ ಎಂದು ಹೇಳಿದರು.
Kannada Bible (KNCL) BSI 2016
ಪ್ರಖ್ಯಾತನಾಗಬೇಕೆಂದಿರುವ ಯಾರೂ ತನ್ನ ಕಾರ್ಯಗಳನ್ನು ಮರೆಯಲ್ಲಿ ಮಾಡುವುದಿಲ್ಲ, ಇವನ್ನೆಲ್ಲಾ ನೀನು ಮಾಡುವುದಾದರೆ ಲೋಕಕ್ಕೆ ಪ್ರಕಟವಾಗುವಂತೆ ಮಾಡಬೇಕು,” ಎಂದು ಯೇಸುವಿಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.