John 7:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
Kannada BSI Bible 2016
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.
Kannada Bible (KNCL) BSI 2016
‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.