John 7:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
Kannada BSI Bible 2016
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆ ಓಲೇಕಾರರು ಮಹಾಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಇವರು - ನೀವು ಯಾಕೆ ಅವನನ್ನು ಹಿಡತರಲಿಲ್ಲ? ಎಂದು ಅವರನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, “ಅವನನ್ನೇಕೆ ನೀವು ಹಿಡಿದು ತರಲಿಲ್ಲ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.