John 7:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
Kannada BSI Bible 2016
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.