John 7:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
Kannada BSI Bible 2016
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.
Kannada Bible (KNCL) BSI 2016
ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.