John 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]
Kannada Bible (KNCL) BSI 2016
ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.