John 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.
Kannada Bible (KNCL) BSI 2016
ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.