John 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ. ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.
Kannada BSI Bible 2016
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೀರ್ಪುಮಾಡಿದರೂ ನನ್ನ ತೀರ್ಪು ಸರಿಯಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ; ನಾನೂ ನನ್ನನ್ನು ಕಳುಹಿಸಿಕೊಟ್ಟ ತಂದೆಯೂ ಇಬ್ಬರು ಇದ್ದೇವೆ.
Kannada Bible (KNCL) BSI 2016
ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.