John 8:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
Kannada BSI Bible 2016
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.
Kannada Bible (KNCL) BSI 2016
ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.